ಪಟ್ಟಣದ ಮುಖ್ಯ ಬೀದಿಯಲ್ಲಿ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ವತಿಯಿಂದ ಪಕ್ಷ ಸಂಘಟನಾ ಯಾತ್ರೆ
ಕುಣಿಗಲ್:- ಪಟ್ಟಣದ ಮುಖ್ಯ ಬೀದಿಯಲ್ಲಿ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ವತಿಯಿಂದ ಪಕ್ಷ ಸಂಘಟನಾ ಯಾತ್ರೆ ನಡೆಸಲಾಯಿತು.
ಪಟ್ಟಣದಲ್ಲಿನ ರಸ್ತೆಬದಿ ವ್ಯಾಪಾರಿಗಳು, ಆಟೋ ಚಾಲಕರು, ಕೂಲಿ ಕಾರ್ಮಿಕರು, ಸೇರಿದಂತೆ ಗೂಡಂಗಡಿ ವ್ಯಾಪಾರಿ ಗಳಿಗೆ ಪಕ್ಷದ ಕಾರ್ಯಕರ್ತರು ಕರಪತ್ರ ವಿತರಿಸಿ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷ ವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಘುಜಾಣಗೆರೆ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಉತ್ತಮ ಆಡಳಿತ ಮಾಡುವಲ್ಲಿ ವಿಫಲವಾಗಿವೆ ಕರ್ನಾಟಕ ರಾಷ್ಟ್ರ ಪಕ್ಷಕ್ಕೆ ಬೆಂಬಲ ನೀಡಿ ಎಂದರು.
 ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ನಿಂಗೇಗೌಡ ತುಮಕೂರು ಜಿಲ್ಲಾ ಅಧ್ಯಕ್ಷರಾದ ಗಜೇಂದ್ರಕುಮಾರ್ ಓಬಳೇಶ್ವರ ಹಾಗೂ ನಾಗೇಂದ್ರ ನಂಜೇಗೌಡ ಶ್ರೀನಿವಾಸ್ ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.
