ಮಾರ್ಕೋನಹಳ್ಳಿ ಜಲಾಶಯದ ನೀರನ್ನು ಕೆರೆ ಸೇರಿದಂತೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡುವಂತೆ ಒತ್ತಾಯಿಸಿ ರೈತಸಂಘ ಹಸಿರುಸೇನೆ ಪದಾಧಿಕಾರಿಗಳು ಕುಣಿಗಲ್ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ, ಕುಣಿಗಲ್ ದೊಡ್ಡ ಕೆರೆಯನ್ನು ಆದಷ್ಟು ಬೇಗ ತುಂಬಿಸಬೇಕು ಮತ್ತು ಮಾರ್ಕೋನಹಳ್ಳಿ ಜಲಾಶಯದ ನೀರನ್ನು ಅಚ್ಚುಕಟ್ಟು ಪ್ರದೇಶಕ್ಕೆ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು .