ಸ್ವಯಂ ಉದ್ಯೋಗ ನೇರ ಸಾಲ



ಸ್ವಯಂ ಉದ್ಯೋಗ ನೇರ ಸಾಲ
<<<<<<< ಯೋಜನೆ>>>>>>

ಪರಿಶಿಷ್ಟ ಜಾತಿ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿಗೆ

 ಕೈಗಾಡಿಗಳನ್ನು ಖರೀದಿ, ರೈತರಿಂದ ತರಕಾರಿ ಹಣ್ಣುಗಳ ಖರೀದಿ ಮಾಡಿ ತಳ್ಳುವ ಗಾಡಿ ಮೂಲಕ ಮಾರಾಟ ಮಾಡಿ ಸ್ವಯಂ ಉದ್ಯೋಗ,

ಹಸು, ಎಮ್ಮೆ, ಕುರಿ, ಹಂದಿ, ಮೊಲ' ಸಾಕಾಣೆ ಮಾಡಿ ಆದಾಯಗಳಿಸಲು ಅವಶ್ಯವಿರುವ ಸಾಲ ಮತ್ತು ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು.

<<<<<<ವೈಶಿಷ್ಟ್ಯಗಳು>>>>>

ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.

ಯೋಜನೆಯ ಘಟಕ ವೆಚ್ಚ ರೂ. 50,000/- ಗಳಾಗಿದ್ದು,

 ಈ ಪೈಕಿ ರೂ. 25,000/- ಸಹಾಯಧನ ಮತ್ತು 

ರೂ. 25,000/- ಸಾಲವಾಗಿರುತ್ತದೆ.

ಸಾಲದ ಮೊತ್ತವನ್ನು ಶೇ. 4ರ ಬಡ್ಡಿದರದಲ್ಲಿ 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಮರು ಪಾವತಿಸಬೇಕಾಗುತ್ತದೆ.

ಅರ್ಜಿ ನಮೂನೆ
(ಆನ್ ಲೈನ್ ಸಲ್ಲಿಕೆ)

https:adijambava.online

ಅರ್ಜಿ ನಮೂನೆ
(ಆಫ್ ಲೈನ್ ಸಲ್ಲಿಕೆ)

<<<<<>>ಅರ್ಹತೆ>>>>>

1 ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು.

2 ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

3 ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

4 ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.

5 ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.

<<<<<<<ನಿಯಮಗಳು>>>>

ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ.1,50,000/- ಹಾಗೂ ನಗರ ಪ್ರದೇಶದವರಿಗೆ ರೂ.2,00,000/- ಗಳ ಮಿತಿಯೊಳಗಿರಬೇಕು.

ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.

ಉದ್ದೇಶಿತ ವ್ಯಾಪಾರ /ಚಟುವಟಿಕೆ ಆಧಾರದ ಮೇಲೆ ಸಾಲ/ಸಹಾಯಧನ ಮಂಜೂರು ಮಾಡಲಾಗುವುದು.

ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.

ಸಹಾಯಧನ ಮತ್ತು ಸಾಲವನ್ನು ನೇರವಾಗಿ ಫಲಾನುಭವಿಗಳಿಗೆ/ಮಾರಾಟಗಾರರಿಗೆ ಬಿಡುಗಡೆ ಮಾಡಲಾಗುವುದು.

ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

ಅರ್ಜಿ

ಭಾವಚಿತ್ರ

ಜಾತಿ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು).

ಆಧಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು).

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ಬುಕ್