ಸಾಮಾಜಿಕ ಹೋರಾಟಗಾರರನ್ನು ಬಂಧಿಸಿದ ಕುಣಿಗಲ್ ಪೊಲೀಸರು


ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು ಹಾಗೂ ಕೆಆರ್ ಎಸ್ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಕುಣಿಗಲ್ ಪೊಲೀಸರು.

ಪುರಸಭೆ ವತಿಯಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪುರಸಭಾ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವನ್ನು ಶನಿವಾರ ಮಾಡಲಾಗುತ್ತಿತ್ತು.

ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ ರಸ್ತೆ ಸುರಕ್ಷತೆ ಕಾಪಾಡಬೇಕಾದ ಪೋಲಿಸರು ಮೌನವಾಗಿದ್ದಾರೆ, ಅಧಿಕಾರಿಗಳು ಮಾಡುತ್ತಿರುವ ಕೆಲಸ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಎಂದು ಕರ್ನಾಟಕ ರಾಷ್ಟ್ರ ಪಕ್ಷದ ರಘುಜಾಣಗೆರೆ ಹಾಗೂ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರ ರಾಜ್ಯ ಅಧ್ಯಕ್ಷ ಎಚ್, ಜಿ, ರಮೇಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ವೇದಿಕೆಗೆ ಸಚಿವರು, ಶಾಸಕರು, ಹಾಗೂ ಗಣ್ಯರು ಆಗಮಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು, ವಿಶೇಷವಾಗಿ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರಾದ ಎಚ್ ಜಿ ರಮೇಶ್ ಅವರನ್ನು ಪ್ರತ್ಯೇಕ ವಾಹನದಲ್ಲಿ ಕರೆದುಕೊಂಡು ಹೋಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.