ಕನ್ನಡ ನಾಡು, ಭಾಷೆ ಮತ್ತು ಕನ್ನಡ ಶಾಲೆಗಳ ಉಳಿವಿಗಾಗಿ ನಮ್ಮ ವೇದಿಕೆ ಸದಾ ಜನತೆಯ ಪರವಾಗಿ ಕೆಲಸ ಮಾಡಲಿದೆ ಎಂದು ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ರಾಜಶೇಖರ್ ಬಿಬಿ ತಿಳಿಸಿದ್ದಾರೆ.

ಕುಣಿಗಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಕನ್ನಡಾಂಬೆ ರಕ್ಷಣಾ ವೇದಿಕೆಯ ತಾಲ್ಲೂಕು ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಾಲ್ಲೂಕು ಘಟಕದ ಉದ್ಘಾಟನೆ  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು


ಪ್ರತಿಯೊಬ್ಬ ಕನ್ನಡಿಗನು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತಾರೆ,ಬರೆಯುತ್ತಾನೆ, ನಿತ್ಯ ವ್ಯವಹಾರ ದಲ್ಲಿ ಕನ್ನಡವನೆ ಬಳಸುತ್ತಾನೆ, 
ಕನ್ನಡೇತರರಿಗೆ ಕನ್ನಡ ಕಲಿಸುತಾ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಜೊತೆಯಲ್ಲಿ ಇರುತ್ತಾನೆ ಎಂದರು.

ರಾಜ್ಯದಲ್ಲಿ ನಮ್ಮ ಸಂಘಟನೆಯನ್ನು ಜಿಲ್ಲೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯನ್ನು ಉದ್ಘಾಟನೆ ಮಾಡುತ್ತಿದ್ದೇವೆ ಇದಕ್ಕೆ  ಪ್ರತಿಯೊಬ್ಬರೂ ಸಹಕರಿಸಬೇಕು ಮತ್ತು ಕನ್ನಡ ನಾಡು ನುಡಿಗೆ ಧಕ್ಕೆ ಆದರೆ ನಮ್ಮ ಸಂಘಟನೆಯಿಂದ ಉಗ್ರ ಹೋರಾಟ ಮಾಡುತ್ತೇವೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ ಕನ್ನಡ ಶಾಲೆ ಉಳಿವಿಗಾಗಿ ನಮ್ಮ ಸಂಘಟನೆ ಸದಾ ಸಿದ್ಧವಾಗಿರುತ್ತದೆ ನಮ್ಮೊಂದಿಗೆ ನೀವು ಸೇರಬೇಕೆಂದು ಕರೆ ನೀಡಿದರು.

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ನಾಗಿ ಇರಬೇಕು ಅದಕ್ಕೆ  ತೊಂದರೆ ಕೊಟ್ಟರೆ ಅವರ ವಿರುದ್ಧ ನಾವು ನಿಲ್ಲುತ್ತೇವೆ ಎಂದು ಕಿಡಿಕಾರಿದರು.

 ನವೆಂಬರ್ 14 ರಂದು ಮೈಸೂರಿನಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಮಟ್ಟದ ಕನ್ನಡಾಂಬೆ ರತ್ನ ಪ್ರಶಸ್ತಿ ಪುರಸ್ಕಾರವನ್ನು ಮೈಸೂರಿನ ಕಲಾಮಂದಿರದಲ್ಲಿ ನೀಡುತ್ತೇವೆ,
 ರಾಜ್ಯದ್ಯಂತ 10 ಕ್ಷೇತ್ರಗಳಿಂದ ಅವರ ಪ್ರತಿಭೆಯನ್ನು ಹಾಗೂ ಸಾಧನೆಯನ್ನು ಗುರುತಿಸಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಭರತನಾಟ್ಯ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವಂತಹ ಗಣ್ಯರಿಗೆ ನಮ್ಮ ವೇದಿಕೆ ವತಿಯಿಂದ  ಸನ್ಮಾನ ಮಾಡಲಾಗುತ್ತದೆ  ಅದಕ್ಕೆ ಪ್ರತಿಯೊಬ್ಬ ಕನ್ನಡಿಗರು ಕೂಡ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

 ಕುಣಿಗಲ್ ನಲ್ಲಿ ಕನ್ನಡಕ್ಕೆ ಯಾವುದೇ ಧಕ್ಕೆ ಆದರೆ ನಮ್ಮ ಕನ್ನಡಾಂಬೆಯ ಸಂಘಟನೆ ಅವರ ವಿರುದ್ಧ ನಿಲ್ಲುತ್ತದೆ ಮತ್ತು ಕನ್ನಡ ಶಾಲೆ ಮತ್ತು ಭಾಷೆ ಉಳಿವಿಗಾಗಿ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಕಾರ್ಮಿಕ ಘಟಕದ ಕಾರ್ಯದರ್ಶಿ ಸಿಂಗ್ರಿಗೌಡ ಮಾತನಾಡಿದರು, 

ಕುಣಿಗಲ್ ಕನ್ನಡಾಂಬೆ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಶಿವರುದ್ರ, ಉಪಾಧ್ಯಕ್ಷ ಗಂಗ ಬುಡ್ಡಯ್ಯ, ಪ್ರಧಾನ ಕಾರ್ಯದರ್ಶಿ ದೇವರಾಜ್, ಕಾನೂನು ಘಟಕದ ಅಧ್ಯಕ್ಷ ಶ್ರೀನಿವಾಸ್, ಸಹ ಕಾರ್ಯದರ್ಶಿಯಾಗಿ ಲೋಕೇಶ್ ಅವರನ್ನು ಆಯ್ಕೆ ಮಾಡಲಾಯಿತು.

 ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್, ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷ ನವೀನ್ ರೈತ ಘಟಕದ ರಾಜ್ಯ ಅಧ್ಯಕ್ಷ ಪರಮೇಶ್ವರ, ರಾಜ್ಯಧ್ಯಕ್ಷ ಪುನೀತ್ ಕಾನೂನು ಘಟಕದ ರಾಜ್ಯ ಅಧ್ಯಕ್ಷ ನವೀನ್ ಕುಮಾರ್ ಕಾರ್ಮಿಕ ಘಟಕದ ಉಪಾಧ್ಯಕ್ಷ ಸಿಂಗ್ರಿಗೌಡ ಸೇರಿದಂತೆ ಹಲವಾರು ಸದಸ್ಯರು ಇದ್ದರು.