ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಚಲಮಸಂದ್ರ ಗ್ರಾಮದಲ್ಲಿ ನೆಲ ಕಡಲೆ ಕಾಯಿ ಬೆಳೆಯನ್ನು ಹಂದಿ ಅಥವಾ ಕಾಡುಪ್ರಾಣಿಗಳ ರಕ್ಷಣೆಗೆ ಹಾಕಿದ್ದ ತಂತಿಗೆ ವಿದ್ಯುತ್ ಸಂಪರ್ಕ ಕೊಟ್ಟ ಹಿನ್ನೆಲೆಯಲ್ಲಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ


 ಮೃತ ವ್ಯಕ್ತಿ ಎಚ್‌ಡಿ ಕೋಟೆ ವಾಸಿ ವಿನೋದ ಎಂದು ತಿಳಿದು ಬಂದಿದೆ ಕಳೆದ ಹಲವಾರು ವರ್ಷಗಳಿಂದ ಚಲಮಸಂದ್ರ ಹುಲಿಯೂರ್ ದುರ್ಗ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆ ನಿರ್ಮಾಣ ಕಟ್ಟಡ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ,
 ಗುರುವಾರ ಬೆಳಿಗ್ಗೆ ಮಾಮೂಲಿನಂತೆ ಶೌಚಕ್ಕೆಂದು ಹೋದಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾನೆ


ವಿಷಯ ತಿಳಿದು ಸ್ಥಳಕ್ಕೆ ಬೆಸ್ಕಾಂ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಶವವನ್ನು ಕುಣಿಗಲ್ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ತರಲಾಗಿದೆ
 ಪರವಾನಿಗೆ ಇಲ್ಲದಿದ್ದರೂ ಬೆಳೆಗಳಿಗೆ ವಿದ್ಯುತ್ ತಂತಿ ಅಳವಡಿಸಿದೆ ರೈತನ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಸಾರ್ವಜನಿಕರು ಹಾಗೂ ಮೃತರ ಸಂಬಂಧಿಕರು ಒತ್ತಾಯಿಸಿದ್ದಾರೆ
 ಫೋಟೋ ಇದೆ :- ಮೃತ ಕಾರ್ಮಿಕ ವಿನೋದ